(ನ್ಯೂಸ್ ಕಡಬ) newskadaba.com ಮಾ. 11 ಕಡಬ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ಸಂಭವಿಸಿದೆ.

ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (23) ಮೃತರು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ವಿನ್ಯಾಸ್‌ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತದೇಹವನ್ನು ಕಡಬ ಆಸ್ಪತ್ರೆಯಲ್ಲಿ ಇಡಲಾಗಿದೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.