ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ

(ನ್ಯೂಸ್ ಕಡಬ) newskadaba.com ಮಾ. 11 ಸಕಲೇಶಪುರ: ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಬೇಕಿರುವ ಕಾರಣ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.‌

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್‌ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಮಾರ್ಚ್ 15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಉದ್ದೇಶಿಸಿತ್ತು ಇದೀಗ ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲು ಉದ್ದೇಶಿಸಿದೆ.

Also Read  ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರುಪಾಲಾದ ನವ ಜೋಡಿ.!

ಚತುಷ್ಪಥ ಕಾಂಕ್ರೀಟ್‌ ರಸ್ತೆ ನಿರ್ಮಿಸುತ್ತಿರುವುದರಿಂದ ಒಂದು ಪಥಕ್ಕೆ ಕಾಂಕ್ರಿಟ್‌ ಹಾಕಿದಾಗ ಅದರ ಕ್ಯೂರಿಂಗ್‌ಗೆ 25 ದಿನಗಳು ಬೇಕು. ಹೀಗಾಗಿ ಈ ವೇಳೆ ವಾಹನ ಸಂಚಾರ ನಿಷೇಧ ಮಾಡಬೇಕಾಗುತ್ತದೆ ಎಂದು ಗುತ್ತಿಗೆದಾರರು ಸಂಸದ ಶ್ರೇಯಸ್‌ ಎಂ.ಪಟೇಲ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಗುಂಡ್ಯದಿಂದ ಸಕಲೇಶಪುರಕ್ಕೆ 40 ಕಿ.ಮೀ.ಇದ್ದು, ಸಕಲೇಶಪುರ ತಾಲೂಕಿನ ಮಾರನಹಳ್ಳಿವರೆಗೂ ರಸ್ತೆ ಕಾಮಗಾರಿ ಮುಗಿದಿದೆ. ಮಾರನಹಳ್ಳಿ, ದೊಡ್ಡ ತಪ್ಪಲು, ದೋಣಿಗಲ್‌ ಗ್ರಾಮದವರೆಗೂ ಅಲ್ಲಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಚತುಷ್ಪಥ ಕಾಂಕ್ರಿಟ್‌ ರಸ್ತೆ ನಿರ್ಮಾಣ ಸಂಬಂಧ ಈವರೆಗೆ 4.8 ಕಿ.ಮೀ. ರಸ್ತೆ ಕಾಮಗಾರಿ ಮುಗಿದಿದ್ದು, ದೊಡ್ಡ ತಪ್ಪಲು ಗ್ರಾಮದ ಬಳಿ ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆಗೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್‌ಎಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!
Scroll to Top