ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ವಕೀಲೆ ಜೀವಾ, ನನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು 13 ಪುಟಗಳ ಸುದೀರ್ಘ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕನಕಲಕ್ಷ್ಮೀ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ. ಈ ಹಿಂದೆ ಎರಡು ಬಾರಿ ಕನಕಲಕ್ಷ್ಮೀ ಅವರ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಲಾಗಿದೆ.

error: Content is protected !!
Scroll to Top