(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.


ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ನಟಿ ರನ್ಯಾಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರಗ ಬಗ್ಗೆ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ” ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.