(ನ್ಯೂಸ್ ಕಡಬ) newskadaba.com ಮಾ. 13: ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.


ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು.