(ನ್ಯೂಸ್ ಕಡಬ) newskadaba.com ಮಾ. 13: ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ 7 ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಹೊಸದಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.

ಪ್ರಶೋತ್ತರ ವೇಳೆಯಲ್ಲಿ ಶಾಸಕ ವಿಶ್ವಾಸ್ ವಸಂತ ವೈದ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಿರ್ದೇಶಕರು ಕಳೆದ ಡಿ.9 ರಂದು ಈ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಆರ್ಥಿಕ ಇಲಾಖೆ ಅನುಮತಿ ದೊರೆತ ಕೂಡಲೇ ನಿಯಮಾನುಸಾರ ಕ್ರಮ ವಹಿಸುವುದಾಗಿ ಹೇಳಿದರು.