(ನ್ಯೂಸ್ ಕಡಬ) newskadaba.com ಮಾ. 14 :ನವದೆಹಲಿ: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಾಡಿನ ಜನತೆಗೆ ಬಣ್ಣದ ಹಬ್ಬ ಹೋಳಿಯ ಶುಭಾಶಯ ಕೋರಿದರು. ನಾಡಿನ ಬೆನ್ನೆಲುಬಾದ ರೈತರ ಬದುಕು ಹಸನಾಗಲಿ; ಎಲ್ಲ ಜನತೆಗೆ ಒಳಿತಾಗಲಿ ಎಂದು ಹಾರೈಸಿದರು.
ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.