‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ’- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮಾ. 15 : ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಇತ್ತೀಚಿಗಿನ ಸ್ವಾತಿ ಬ್ಯಾಡಗಿ ಎಂಬವರ ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ ಎಂದು ಬರೆದುಕೊಂಡಿದ್ದಾರೆ.

Also Read  ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ !

error: Content is protected !!
Scroll to Top