ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಲ್ಲೇ ಇರುವಂತೆ ದಿನೇಶ್ ಗುಂಡೂರಾವ್ ಸೂಚನೆ

(ನ್ಯೂಸ್ ಕಡಬ) newskadaba.com ಮಾ. 15 : ಮಂಗಳೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ. ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು.

Also Read  ಉರುಳಿಗೆ ಬಿದ್ದ ಚಿರತೆ..! ➤ ಅರಣ್ಯ‌ ಇಲಾಖೆಯಿಂದ‌ ಯಶಸ್ವಿ ಕಾರ್ಯಾಚರಣೆ

error: Content is protected !!
Scroll to Top