ಮಂಗಳೂರು: 75 ಕೋ.ರೂ. ಮೌಲ್ಯದ ಡ್ರಗ್ಸ್ ವಶ ಕೇಸ್

(ನ್ಯೂಸ್ ಕಡಬ) newskadaba.com ಮಾ. 18: ಬೆಂಗಳೂರು: ಬೆಂಗಳೂರಿನಲ್ಲಿ 75 ಕೋಟಿ ರೂ. ಮಾಲ್ಯದ ಎಂಡಿಎಂಎ ಡ್ರಗ್ಸ್ ಸಹಿತವಾಗಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳನ್ನು ನಗರದ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ದಕ್ಷಿಣ ಆಫ್ರಿಕಾದ ಪ್ರಜೆಗಳಾದ ಬಂಬಾ ಫಾಂಟಾ ಆಲಿಯಾಸ್ ಅಡೊನಿಸ್ ಜಬುಲೈಲ್ (31) ಮತ್ತು ಒಲಿಜೊ ಇವನ್ಸ್ ಆಲಿಯಾಸ್ ಅಬಿಗೈಲ್ ಅಡೊನಿಸ್ (30) ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರು ಈ ಇಬ್ಬರು ಆರೋಪಿಗಳನ್ನು ಮಾ.14ರಂದು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆರೋಪಿಗಳಿಬ್ಬರನ್ನು ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಸಲ್ಲಿಸಿಸದ್ದರು. ಮನವಿ ಪುರಸ್ಕರಿಸಿದ ಕೋರ್ಟ್ ಸೋಮವಾರ ಆರೋಪಿಗಳನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

error: Content is protected !!
Scroll to Top