(ನ್ಯೂಸ್ ಕಡಬ) newskadaba.com ಮಾ. 18 ವಾಷಿಂಗ್ಟನ್: ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಬಾಹ್ಯಕಾಶದಲ್ಲಿ ಅದ್ಭುತ ಸಾಹಸ ಮುಗಿಸಿ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಾಳೆ ಬೆಳಗ್ಗಿನಜಾವ ಭೂಮಿಗೆ ವಾಪಸ್ಸಾಗಲಿದ್ದಾರೆ. ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಅವರು ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27) ಭೂಮಿಗೆ ತಲುಪಲಿದ್ದಾರೆ ಎಂದು ನಾಸಾ ತಿಳಿಸಿದೆ.


ಸುನಿತಾ ವಿಲಿಯಮ್ಸ್, ಬುಚ್ ವಿಲ್ಲೋರ್ ಮತ್ತು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಅವರು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಫೋರಿಡಾ ಕರಾವಳಿಯಲ್ಲಿ ಸ್ಪೇಸ್‌ಎಕ್ಸ್‌ನ ಡ್ರಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆಯಲ್ಲಿ ಇಳಿಯಬಹುದು ಎಂದು ನಾಸಾ ತಿಳಿಸಿದೆ.