ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು-ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿ ಇಬ್ಬರು ವಿದೇಶಿ ಮಹಿಳೆಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಕಳೆದ ವರ್ಷದಲ್ಲಿ ದೆಹಲಿ ಮತ್ತು ಬೆಂಗಳೂರು ನಡುವೆ ೫೯ ಬಾರಿ ಪ್ರಯಾಣಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಇತ್ತೀಚೆಗೆ ೭೫ ಕೋಟಿ ರೂ. ಮೌಲ್ಯದ ಮಾದಕವಸ್ತು ಜಾಲವನ್ನು ಪತ್ತೆಹಚ್ಚಿದ್ದು, ೩೭.೮೭ ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇಬ್ಬರು ವಿದೇಶಿ ಪ್ರಜೆಗಳಾದ ಬಾಂಬಾ ಫ್ಯಾಂಟಾ ಮತ್ತು ಅಬಿಗೈಲ್ ಅಡೋನಿಸ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದ ದಕ್ಷಿಣ ಆಫ್ರಿಕಾದ ಈ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಅವರ ಬಳಿಯಿದ್ದ ಎರಡು ಟ್ರಾಲಿ ಬ್ಯಾಗ್ ಗಳಲ್ಲಿ ಸಾಗಾಟ ಮಾಡಿದ್ದ 75 ಕೋಟಿ ರೂ ಮೌಲ್ಯದ 37.585 ಕೆಜಿ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್ ಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದರು.

Also Read  ಉಡುಪಿ: ಸೇನಾ ನೇಮಕಾತಿಗೆ  ಅರ್ಜಿ ಅಹ್ವಾನ

error: Content is protected !!