(ನ್ಯೂಸ್ ಕಡಬ) newskadaba.com ಮಾ. 18 : ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ಬರೆಯಲಾಗಿದೆ. ಈ ಕುರಿತು ಪುನೀತ್ ಅವರ ಜನ್ಮದಿನದ ಪ್ರಯುಕ್ತ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಘೋಷಣೆ ಮಾಡಿದ್ದಾರೆ.

ಈ ವಿಚಾರ ತಿಳಿದು ಅಪ್ಪು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಇದರ ಅಧಿಕೃತ ದಿನಾಂಕ ಇನ್ನಷ್ಟೇ ತಿಳಿಯಬೇಕಿದೆ. ‘ಅಪ್ಪು’ ಅನ್ನೋ ಶೀರ್ಷಿಕೆಯಲ್ಲೇ ಪುನೀತ್ ಬಯೋಗ್ರಫಿ ಬರೆಯಲಾಗಿದೆ. ಅಶ್ವಿನಿ ಮತ್ತು ಪ್ರಕೃತಿ ಬನವಾಸಿ ಒಟ್ಟಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಎರಡು ವರ್ಷಗಳ ಪ್ರಯತ್ನದಿಂದ ಈ ಪುಸ್ತಕ ಹೊರ ಬರುತ್ತಿದೆ.