(ನ್ಯೂಸ್ ಕಡಬ) newskadaba.com ಮಾ. 19 : ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.



ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಪ್ರಕರಣವನ್ನು ರದ್ದು ಕೋರಿ ಬಿಜೆಪಿ ನಾಯಕ ಆರ್.ಅಶೋಕ್ ಹೈಕೋರ್ಟ್ಗೆ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್, ಅಶೋಕ್ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ, ಪ್ರಕರಣದ ತನಿಖೆ ನಡೆಸಲು 2018ರಲ್ಲಿ ಆದೇಶ ನೀಡಿತ್ತು.