ವಿದ್ಯುತ್ ಗ್ರಾಹಕರಿಗೆ ಶಾಕ್‌, ಕೆಇಆರ್‌ಸಿಯಿಂದ ದರ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಸೇರಿದಂತೆ ನಾನಾ ಬಗೆಯ ಬೆಲೆ ಏರಿಕೆಗಳ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ.

ದರಗಳು ಹಂತ ಹಂತವಾಗಿ ಏರಿಕೆಯಾಗಲಿವೆ. 2025-26ರ ಅವಧಿಯಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳವಾಗಲಿದೆ. 2026-27ರ ಅವಧಿಯಲ್ಲಿ ಪ್ರತಿ ಯೂನಿಟ್‌ಗೆ 35 ಪೈಸೆ, 2027-28ರ ಅವಧಿಯಲ್ಲಿ ಪ್ರತಿ ಯೂನಿಟ್‌ಗೆ 34 ಪೈಸೆ ಹೆಚ್ಚಳವಾಗಲಿದೆ. ಈ ಹೆಚ್ಚಳದಿಂದಾಗಿ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 8519 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಸಂಗ್ರಹವಾಗುವ ನಿರೀಕ್ಷೆಯಿದೆ. ಆದರೆ, ಈಗಾಗಲೇ ವಿದ್ಯುತ್ ಸಂಸ್ಥೆಗಳಿಗೆ ಸುಮಾರು 4659 ಕೋಟಿ ರೂಪಾಯಿಗಳಷ್ಟು ಪಿಂಚಣಿ ಮತ್ತು ಗ್ರಾಚ್ಯುಟಿ ಬಾಕಿ ಇದೆ ಎಂದು ವರದಿಯಾಗಿದೆ.

Also Read  ? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ

error: Content is protected !!
Scroll to Top