(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.31. ಕಾಲೇಜೊಂದರ ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳದಲ್ಲೇ ಮುತ್ತಿನ ಮಳೆಗರೆಯುತ್ತಾ ಮೈ ಮೇಲೆ ಕೈ ಹಾಕುತ್ತಾ ಅಶ್ಲೀಲವಾಗಿ ವರ್ತಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಬೆಳ್ತಂಗಡಿಯ ಖಾಸಗಿ ತಾಂತ್ರಿಕ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಕಾಲೇಜಿನ ಹಿಂಭಾಗದಲ್ಲಿನ ಖಾಲಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ಕಾಲೇಜು ಪ್ರಿನ್ಸಿಪಾಲರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದ್ದು, ಕೊನೆಗೆ ಸಾರ್ವಜನಿಕರೇ ಅಸಭ್ಯ ವರ್ತನೆಯ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಮಾಧ್ಯಮಗಳಿಗೆ ನೀಡಿದ್ದಾರೆ. ಸದ್ಯ ಅಶ್ಲೀಲ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಕಾಲೇಜು ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.