‘ಮಾ. 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ’- ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com, ಮಾ. 24: ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಿಸಿದ್ದೆವು. ಅದಾದ ನಂತರಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.

ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ‍್ಯಾಪ್ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಚಿವರೊಬ್ಬರಿಗೆ ಹನಿಟ್ರ‍್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ಅವರು ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

error: Content is protected !!
Scroll to Top