(ನ್ಯೂಸ್ ಕಡಬ) newskadaba.com , ಮಾ.28: ಕೊಡಗು: ಜಿಲ್ಲೆಯಲ್ಲಿ ಭೀಕರ ಹತ್ಯಾಕಾಂಡ ನಡೆದಿದೆ. ಪತ್ನಿಗೆ ಅಕ್ರಮ ಸಂಬಂಧ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿ ಸೇರಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಳುತೋಡು ಗ್ರಾಮದಲ್ಲಿ ನಡೆದಿದೆ.


ಕರಿಯ (75), ಗೌರಿ (70), ನಾಗಿ (35) ಹಾಗೂ 8 ವರ್ಷದ ಕಾವೇರಿಯನ್ನು ಕತ್ತಿಯಿಂದ ಹಲ್ಲೆಗೈದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ (35) ಆರೋಪಿಯಾಗಿದ್ದು, ಈತ ಸದ್ಯ ನಾಪತ್ತೆಯಾದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.