ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ

(ನ್ಯೂಸ್ ಕಡಬ) newskadaba.com , .02 : 14 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಬುಧವಾರ ಮಧ್ಯರಾತ್ರಿ 1:43 ಗಂಟೆಗೆ ಲೋಕಸಭೆ ಅಂಗೀಕರಿಸಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆಗಳ ಕಾಲ ಚರ್ಚೆ ನಡೆಯಿತು. ನಂತರ 2 ತಾಸುಗಳ ಕಾಲ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮಸೂದೆಗೆ ಸದನ ಅಸ್ತು ಎಂದಿದೆ. ಮಸೂದೆ ಪರ 288 ಹಾಗೂ ಮಸೂದೆ ವಿರುದ್ಧ 232 ಮತ ಬಿದ್ದವು.

ಮಸೂದೆಯನ್ನು ಮತಕ್ಕೆ ಹಾಕುವ ಮುನ್ನ ದಿನವಿಡೀ ಚರ್ಚೆ ನಡೆಯಿತು. ಮಸೂದೆ ವಿಚಾರವಾಗಿ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ ಜೋರಾಗಿತ್ತು. ಮುಸ್ಲಿಮರ ಹಕ್ಕು ಕಸಿಯುವ ಯತ್ನ ಎಂದು ವಿಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿದವು. ಮಸೂದೆ ಯಾವುದೇ ಧರ್ಮದ ವಿರೋಧಿಯಲ್ಲ ಎಂದು ಆಡಳಿತ ಪಕ್ಷವು ಸಮರ್ಥಿಸಿಕೊಂಡಿತು.

error: Content is protected !!
Scroll to Top