ಬಾಲಿವುಡ್ ಕ್ರಾಂತಿಕಾರಿ ನಟ ಮನೋಜ್ ಕುಮಾ‌ರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಎ.04 : ದೇಶಭಕ್ತಿ ಚಿತ್ರಗಳನ್ನು ನಿರ್ದೇಶಿಸಿ, ನಟಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಭಾರತ್ ಕುಮಾರ್ ಎಂದೇ ಪ್ರಸಿದ್ದರಾಗಿದ್ದ ಬಾಲಿವುಡ್ ಹಿರಿಯ ನಟ ಹಾಗೂ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಮನೋಜ್ ಕುಮಾರ್ ಅವರು ಇಂದು ಮುಂಜಾನೆ 3.30ರ ಸುಮಾರಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ.

ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ (87) ಮುಂಬೈನ ಕೋಕಿಲಾ ಬೆನ್ ಧೀರುಬಾಯಿ ಅಂಬಾನಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಮನೋಜ್ ಕುಮಾರ್ ಅವರ ನಿವಾಸದಲ್ಲಿ ಇಂದು ಪಾಥೀರ್ಘವ ಶರೀರದ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದ್ದು, ಅಭಿಮಾನಿಗಳು ಹಾಗೂ ಬಾಲಿವುಡ್ ನ ಖ್ಯಾತ ನಟರು, ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರು ದರ್ಶನ ಪಡೆಯಲಿದ್ದು, ಅಗಲಿದ ನಟನಿಗೆ ಕಂಬನಿ ಮಿಡಿದಿದ್ದಾರೆ. ಮನೋಜ್ ಕುಮಾರ್ ಅವರ ಅಂತಿಮ ಸಂಸ್ಕಾರವನ್ನು ನಾಳೆ ಮಧ್ಯಾಹ್ನ 12ಕ್ಕ ಪವನ್ ಹನ್ಸ್ ನಲ್ಲಿ ನೆರವೇರಿಸಲಾಗುವುದು ಎಂದು ಪುತ್ರ ಕುನಾಲ್ ಗೋಸ್ವಾಮಿ ತಿಳಿಸಿದ್ದಾರೆ.

error: Content is protected !!
Scroll to Top