ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ

(ನ್ಯೂಸ್ ಕಡಬ) newskadaba.com, ಎ.04  ಬ್ಯಾಂಕಾಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ.

ಬಂಗಾಳ ಕೊಲ್ಲಿ ಬಹು-ವಲಯ ಮತ್ತು ತಾಂತ್ರಿಕ ಸಹಕಾರ (BIMSTEC) ಗುಂಪಿನ ನಾಯಕರ ಶೃಂಗಸಭೆಯ ಹೊರಗೆ ಉಭಯ ನಾಯಕರು ಭೇಟಿ ಮಾಡಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಮುಂಬರುವ BIMSTEC ಗುಂಪಿನ ಅಧ್ಯಕ್ಷ ಸ್ಥಾನವನ್ನು ಬಾಂಗ್ಲಾದೇಶ ವಹಿಸಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರನ್ನು ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳಿಸಿದ ನಂತರ ಮೊಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರ ಮತ್ತು ಅಲ್ಲಿ ಕಟ್ಟಾ ಇಸ್ಲಾಮಿಕ್ ಶಕ್ತಿಗಳ ಬಲವರ್ಧನೆ ಬಗ್ಗೆ ಭಾರತದ ಆತಂಕ ನಡುವೆ ಉಭಯ ದೇಶಗಳ ಸಂಬಂಧ ಕುಸಿದಿದೆ.

error: Content is protected !!
Scroll to Top