(ನ್ಯೂಸ್ ಕಡಬ) newskadaba.com ಎ. 29 ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿಯಾದ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿ ಕಚೇರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಫೋಟದ ನಂತರ 16 ಗಾಯಾಳುಗಳನ್ನು ಆಸ್ಪತ್ರೆಗೆ ತರಲಾಯಿತು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ತಿಳಿಸಿದೆ.