(ನ್ಯೂಸ್ ಕಡಬ) newskadaba.com ಎ. 29: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ನಡೆದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂಸ್ಮಾರ್ಗ್, ತೌಸಿಮೈದನ್, ದೂದ್ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್‌ಹಾರ್ ಮುಚ್ಚಲು ನಿರ್ಧರಿಸಲಾಗಿದೆ. ಇನ್ನು ತೆರೆದಿರುವ ತಾಣಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತದೆ ಎನ್ನಲಾಗಿದೆ. ವಾರದ ಹಿಂದಷ್ಟೇ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಲಷ್ಕರ್ -ಎ- ತೊಯ್ಬಾದ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿತ್ತು. ಇದರ ವಿರುದ್ಧ ಆಕ್ರೋಶ ವ್ಯಕ್ತವಾದ ಬಳಿಕ ನಮ್ಮ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆ. ನಮಗೂ ದಾಳಿಗೂ ಸಂಬಂಧವಿಲ್ಲ ಎಂದು ಹೇಳಿತ್ತು.