(ನ್ಯೂಸ್ ಕಡಬ) newskadaba.com, ಮೇ.09: ಮೇ – ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರ ಹಾಗೂ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರೀಮಿಯರ್ ಲೀಗ್ ( ಐಪಿಎಲ್) ನ ಮುಂದಿನ ಎಲ್ಲಾ ಹಂತದ ಪಂದ್ಯಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಾತ್ಕಾಲಿಕವಾಗಿ ಅಮಾನತುಪಡಿಸುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಕಳೆದ ರಾತ್ರಿ ಪಾಕಿಸ್ತಾನ ಭಾರತದ ಮೂರು ಗಡಿ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಡೋನ್ ದಾಳಿ ನಡೆಸಿತ್ತು. ಹೀಗಾಗಿ ಹಿಮಚಾಲ ಪ್ರದೇಶದಲ್ಲಿ ನಡೆಯುತ್ತಿದ್ದ ದೆಹಲಿ ಹಾಗೂ ಪಂಜಾಬ್ ನಡುವಿನ ಪಂದ್ಯವನ್ನು ರದ್ದುಪಡಿಸಲಾಗಿತ್ತು. ಐಪಿಎಲ್ ಪಂದ್ಯ ನಡೆಯುವ ವೇಳೆ ಪಾಕ್ ನ ಆತ್ಮಾಹುತಿ ದಾಳಿ ಇಲ್ಲವೇ ಡೋನ್ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಬಿಸಿಸಿಐಗೆ ಕೇಂದ್ರ ಗುಪ್ತಚರ ವಿಭಾಗ ಎಚ್ಚರಿಕೆ ಕೊಟ್ಟಿತ್ತು. ಹೀಗಾಗಿ ಇಂದು ತುರ್ತು ಸಭೆ ನಡೆಸಿದ ಬಿಸಿಸಿಐ ಬಾಕಿ ಉಳಿದಿರುವ 16 ಐಪಿಎಲ್ ಪಂದ್ಯಗಳನ್ನು ತಾತ್ಕಾಲಿಕವಾಗಿ ಅಮಾನತುಪಡಿಸಲಾಗಿದೆ ಎಂದು ಘೋಷಣೆ ಮಾಡಿತು.