ಪಹಲ್ಗಾಮ್ ದಾಳಿಯ 3 ಶಂಕಿತ ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ



(ನ್ಯೂಸ್ ಕಡಬ) newskadaba.com , ಮೇ.13. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದು, ಉಗ್ರರ ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.







ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೋಸ್ಟರ್‌ಗಳನ್ನು ಅಂಟಿಸಿ ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡಲಾಗುವುದು. ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಹೇಳಲಾಗಿದೆ.






ಸದ್ಯ ಜಮ್ಮು ಮತ್ತು ಕಾಶ್ಮೀರದಾದ್ಯಂತ ‘ಭಯೋತ್ಪಾದನೆ ಮುಕ್ತ ಕಾಶ್ಮೀರ’ ಎಂಬ ಸಂದೇಶಗಳನ್ನು ಒಳಗೊಂಡಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಲಷ್ಕರ್-ಇ-ತೈಬಾದ (ಎಲ್‌ಇಟಿ) ಮೂವರು ಭಯೋತ್ಪಾದಕರಾದ ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಪಾಕ್ ಪ್ರಜೆಗಳಾದ ಅಲಿ ಭಾಯ್ ಅಕಾ ತಲ್ಹಾ ಭಾಯ್ ಮತ್ತು ಹಶಿಮ್ ಮೂಸಾ ಅಕಾ ಸುಲೇಮಾನ್ ಫೋಟೋಗಳಿವೆ.

error: Content is protected !!
Scroll to Top