ದೆಹಲಿ ಕಾಲೇಜಿನಲ್ಲಿ ಬೆಂಕಿ ಅವಘಡ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com , ಮೇ.15. ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ಶ್ರೀ ಗುರು ಗೋಬಿಂದ್ ಸಿಂಗ್ (ಜಿಜಿಎಸ್) ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಕಾಲೇಜಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬೆಳಿಗ್ಗೆ 9:40 ರ ಸುಮಾರಿಗೆ ಸಂಭವಿಸಿದೆ.

ಮೊದಲ ಮಹಡಿಯಲ್ಲಿರುವ ಕಾಲೇಜು ಗ್ರಂಥಾಲಯದಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಎರಡನೇ ಮತ್ತು ಮೂರನೇ ಮಹಡಿಗೆ ಹರಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 11 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದವು ಎಂದು ಹೇಳಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಗಾಯಗಳ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

error: Content is protected !!
Scroll to Top