‘ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ’- ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com , ಮೇ.17: ಭಾರತೀಯ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪ್ರಶ್ನೆ ಮಾಡುವ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಪಾಕಿಸ್ತಾನ ಪ್ರವಾಸ ಭಾಗ್ಯ ಕರುಣಿಸಲಿ. ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಹೋಗಿ ಸಾಕ್ಷಿ ಸಂಗ್ರಹ ಮಾಡಿಕೊಂಡು ಬರಲಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್, ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿಕೆಗಳಿಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನ ವಿರುದ್ಧ ನಮ್ಮ ಸೈನಿಕರು ಹೋರಾಟ ಮಾಡಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ನಿಲುವು ಏನು ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು. ಮಲ್ಲಿಕಾರ್ಜುನ ಖರ್ಗೆ ನಾವು ಬೆಂಬಲ ಕೊಡುತ್ತೇವೆ ಅಂದರು. ಸರ್ಕಾರದ ಎಲ್ಲಾ ನಿರ್ಧಾರಕ್ಕೆ ಸಹಕಾರ ಕೊಡುತ್ತೇವೆ ಅಂದರು. ಈಗ ಬೇರೆ ಬೇರೆ ರಾಜ್ಯದಲ್ಲಿ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಬೇರೆ ಬೇರೆ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಹೈಕಮಾಂಡ್ ಸೂಚನೆಯಾ ಎಂದು ಕಾಂಗ್ರೆಸ್ ಹೈಕಮಾಂಡ್ ತಿಳಿಸಬೇಕೆಂದು ಆಗ್ರಹ ಮಾಡಿದರು.

Also Read  ರಾಷ್ಟ್ರಪತಿ ಭವನಕ್ಕೆ ವ್ಯಾಪಿಸಿದ ಕೊರೋನ: 500 ಮಂದಿಗೆ ಕ್ವಾರಂಟೈನ್

ಪಾಕಿಸ್ತಾನದ ಒಳಗೆ, ಹೊರಗೆ ನಮ್ಮ ಸೇನೆ ಭಯೋತ್ಪಾದಕರನ್ನ, ತರಬೇತಿ ಕೇಂದ್ರಗಳನ್ನು ಹೊಡೆದಿದ್ದಾರೆ. ಅವರ ಕುಟುಂಬಕ್ಕೆ ಪಾಕಿಸ್ತಾನ ಸರ್ಕಾರ ಹಣ ಕೊಟ್ಟಿದೆ. ಈಗ ಅದಕ್ಕೆ ಸಾಕ್ಷಿ ಏನು ಅಂತ ಕಾಂಗ್ರೆಸ್ ಕೇಳುತ್ತಿದೆ. ನಮ್ಮ ಸೈನಿಕರನ್ನು ಅವಮಾನಿಸುತ್ತಿದೆ. ಹಿಂದೆ ಸರ್ಜಿಕಲ್ ಸ್ಟ್ರೈಕ್‌ಗೂ ಸಾಕ್ಷಿ ಕೇಳಿದ್ದರು. ಈಗ ಆಪರೇಷನ್ ಸಿಂಧೂರಕ್ಕೂ ಸಾಕ್ಷಿ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಬೇಕು. ಇಲ್ಲದೇ ಹೋದರೆ ಅವರ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿ. ಸಾಕ್ಷಿ ಕೇಳೋರನ್ನ ಪಾಕಿಸ್ತಾನಕ್ಕೆ ಕಳಿಸಿ. ಅನುಭವ ಪಡೆದು ಬರಲಿ ಎಂದು ವಾಗ್ದಾಳಿ ನಡೆಸಿದರು.

error: Content is protected !!
Scroll to Top