ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ

(ನ್ಯೂಸ್ ಕಡಬ) newskadaba.com , ಮೇ.17: ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಸೇರಿ ಇಬ್ಬರನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.

ಜ್ಯೋತಿ ಮಲ್ಹೋತ್ರಾ ಹಾಗೂ ಗುಜಾಲಾ ಬಂಧಿತ ಆರೋಪಿಗಳು. 2023ರಲ್ಲಿ ಪಾಕ್‌ಗೆ ಹೋಗಿದ್ದ ಜ್ಯೋತಿ ಪಾಕ್ ಹೈಕಮಿಷನ್ ಉದ್ಯೋಗಿ ಡ್ಯಾನಿಶ್ ಜೊತೆ ನಿಕಟ ಸಂಬಂಧ ಬೆಳೆಸಿದ್ದಳು.  ಅಲ್ಲದೇ ಪಾಕ್ ಗುಪ್ತಚರ ಏಜೆಂಟ್‌ಗಳೊಂದಿಗೆ ಸಹ ಸಂಪರ್ಕ ಹೊಂದಿದ್ದಳು.  ಮೇ 1 3ರಂದು ಡ್ಯಾನಿಶ್‌ನನ್ನು ಸರ್ಕಾರ  ಮನೆಗೆ ಕಳುಹಿಸಿತ್ತು. ‘ಟ್ರಾವೆಲ್ ವಿತ್ ಜೋ’ ಯೂಟ್ಯೂಬ್ ನಡೆಸುತ್ತಿದ್ದ ಜ್ಯೋತಿ ತನ್ನ ಯೂಟ್ಯೂಬ್‌ ಚಾನಲ್‌ನಲ್ಲಿ ಪಾಕಿಸ್ತಾನ ಪರ ಇರುವ ವಿಷಯಗಳನ್ನು ಅಪ್ಲೋಡ್‌ ಮಾಡುತ್ತಿದ್ದಳು. ಅಲ್ಲದೇ ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

Also Read  ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ

 

error: Content is protected !!
Scroll to Top