ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿ‌ ಸಮೀಪದ ಕನ್ವರೆ ಎಂಬಲ್ಲಿ ಭಾನುವಾರದಂದು ನಡೆದಿದೆ.

ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮಾರುತಿ‌ ಸುಝುಕಿ ವ್ಯಾಗನರ್ ಕಾರಿಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಕಾರಿನ ಚಾಲಕ, ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಹೊರಬರಲಾಗದೆ ಕಾರಿನಲ್ಲಿ ಸಿಲುಕಿಕೊಂಡಿದ್ದರು. ಸಮೀಪದ ಖಾಸಗಿ ವಿದ್ಯಾಲಯದ ಮೈದಾನದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ಯುವಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದಿಂದ ಮರವನ್ನು ತುಂಡರಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ‌ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

error: Content is protected !!
Scroll to Top