(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಕರೋನಾ ಪರೀಕ್ಷೆಗೆ ಒಳಪಡಿಸಿದ್ದು, 9 ಹೊಸ ಪ್ರಕರಣ ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.8.65 ನಷ್ಟಿದೆ. ಕೇರಳ ಮತ್ತು ಆಂಧ್ರಪ್ರದೇಶದಲ್ಲೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿವೆ. ರಾಜ್ಯದಲ್ಲಿ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.