(ನ್ಯೂಸ್ ಕಡಬ) newskadaba.com , ಮೇ.26. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ.

ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ.
ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ ನೆಲಕ್ಕುರುಳಿವೆ. ಬಿರುಗಾಳಿ ಸಹಿತ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಆಗಿದೆ. ವಾಹನ ಸವಾರರಿಗೆ , ಪ್ರಯಾಣಿಕರಿಗೆ ಆತಂಕದ ಪರಿಸ್ಥಿತಿ ಎದುರಾಗಿದೆ.