ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ಬಿಜೆಪಿಯ ವಿರುದ್ಧ ರಾಜ್ಯ ಸರಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

ಈ ಕುರಿತು ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಮೂಲಕ ದೂರು ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರಕಾರಿ ಅಭಿಯೋಜಕರಾದ ಬಿ.ಎಸ್.ಪಾಟೀಲ್ ಮತ್ತು ಬೆಂಗಳೂರಿನ 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರಕಾರಿ ಅಭಿಯೋಜಕರಾದ ಶೈಲಜಾ ನಾಯಕ್ ಅವರನ್ನು ನಿಯೋಜಿಸಲಾಗಿದೆ.

error: Content is protected !!
Scroll to Top