ಕುಕ್ಕೆ ಸುಬ್ರಹ್ಮಣ್ಯ: ವ್ಯಾಪಕ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

(ನ್ಯೂಸ್ ಕಡಬ) newskadaba.com , ಮೇ.26. ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ.

ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ದೇವಸ್ಥಾನದ ಸಿಬ್ಬಂದಿಗಳನ್ನು ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

error: Content is protected !!
Scroll to Top