(ನ್ಯೂಸ್ ಕಡಬ) newskadaba.com , ಮೇ.26. ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ.

ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಇವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.