ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ



(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮೇ 27ರಂದು ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.







ಬಂಟ್ವಾಳದ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.






ಇನ್ನು ಈಗಾಗಲೇ ಪೊಲೀಸರು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ ಪೂಜಾರಿ(21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಪೃಥ್ವಿರಾಜ್ ಜೋಗಿ(21) ಹಾಗೂ ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ(19) ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!
Scroll to Top