ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ



(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.







21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024 ಜಾರಿ ಮಾಡಿ ರಾಜ್ಯ ಸರ್ಕಾರ, ಗೆಜಟ್ ನೋಟಿಫಿಕೇಷನ್ ಹೊರಡಿಸಿದೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿ ಕೊಡಲಾಗಿತ್ತು.






ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ. ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

error: Content is protected !!
Scroll to Top