ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್



(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ.





ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.






ಆರೋಗ್ಯ ಇಲಾಖೆಯ ಗೈಡ್​ಲೈನ್ಸ್​:

*ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
* ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
* ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
* ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
* ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ.

error: Content is protected !!
Scroll to Top