ಆರ್‌ಸಿಬಿ ವಿಜಯೋತ್ಸವದ ವೇಳೆ ಹೃದಯಾಘಾತ – ಅಭಿಮಾನಿ ಸಾವು

(ನ್ಯೂಸ್ ಕಡಬ) newskadaba.com ಜೂ:04, ಬೆಳಗಾವಿ: ಆರ್‌ಸಿಬಿ ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಹಿನ್ನೆಲೆ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಕುಂಬಾರ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ. ಮಂಗಳವಾರ ಅಹಮದಾಬಾದ್‌ನಲ್ಲಿ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿದ ಹಿನ್ನೆಲೆ ಅಭಿಮಾನಿಗಳು ವಿಜಯೋತ್ಸವ ಮಾಡಿದ್ದರು. ಈ ವೇಳೆ ಮಂಜುನಾಥ್ ಟ್ರ‍್ಯಾಕ್ಟರ್‌ನಲ್ಲಿ ಹಾಡು ಹಾಕಿ ಕುಣಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಮಂಜುನಾಥ್ ಸಾವನ್ನಪ್ಪಿದ್ದಾನೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Scroll to Top