ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ.

ನಿನ್ನೆ ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕಾಲ್ತುಳಿತ ಘಟನೆಗೆ ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದ್ದು, ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

Scroll to Top