ಅನ್ಯ ವ್ಯಕ್ತಿ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ನೀಚ ತಂದೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 14. ಬೇರೊಬ್ಬನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹೆತ್ತ ತಂದೆಯೇ ಮಗಳಿಗೆ ಬಲವಂತ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಯು ತಂದೆಯ ಒತ್ತಾಯಕ್ಕೆ ಸಹಕರಿಸದೇ ಇದ್ದಾಗ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ. ನಂತರ ಬಲವಂತವಾಗಿ ರೂಮಿನಲ್ಲಿ ಕೂಡಿ ಹಾಕಿ, ತಾನು ಹೇಳಿದಂತೆ ಮಾಡದಿದ್ದರೆ ಊಟ ತಿಂಡಿ ಕೊಡುವುದಿಲ್ಲ ಎಂದು ಬೆದರಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಬಾಲಕಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆಕೆಯನ್ನು ರಕ್ಷಿಸಿ ಆರೋಪಿ ತಂದೆಯನ್ನು ವಶಕ್ಕೆ ಪಡೆದಿದ್ದಾರೆ.  ಸದ್ಯ ಸಂತ್ರಸ್ತ ಬಾಲಕಿಯನ್ನು ಚಿಕ್ಕಬಳ್ಳಾಪುರದ ಬಾಲಮಂದಿರಕ್ಕೆ ಕರೆದೊಯ್ದು ಅಲ್ಲಿ ಆರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ‌ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Scroll to Top