(ನ್ಯೂಸ್ ಕಡಬ) newskadaba.com ಜೂ. 16. ಅಹಮದಾಬಾದ್ನಲ್ಲಿ ಗುರುವಾರದಂದು ನಡೆದ ಏರ್ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ವಿಮಾನದಲ್ಲಿ ಎರಡು ಬ್ಲ್ಯಾಕ್ಬಾಕ್ಸ್ಗಳಿದ್ದು, ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಕಾಕ್ಪಿಟ್ ವಾಯ್ಸ್ ರೆಕಾರ್ಡರ್ ಭಾನುವಾರದಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ.
ಸದ್ಯ ಇದೀಗ ದೊರಕಿರುವ ಎರಡನೇ ಬ್ಲ್ಯಾಕ್ ಬಾಕ್ಸ್ ನಿಂದ ಘಟನೆಯ ಪ್ರತಿ ಸೆಕೆಂಡ್ನಲ್ಲಿ ಏನಾಯ್ತು ಎನ್ನುವುದನ್ನು ತಿಳಿದುಕೊಳ್ಳಬಹುದು. ಇದು ಕಾಕ್ಪಿಟ್ ಹಾಗೂ ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎನ್ನುವುದರ ಕುರಿತು ನಿಖರ ಮಾಹಿತಿ ನೀಡಲಿದೆ.