ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ನಗರದ ಪುರಭವನದಲ್ಲಿ ನಡೆಯಲಿದೆ.
ವಿಧಾನಸಭೆ  ಸ್ಪೀಕರ್ ಯು.ಟಿ.ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top