ಜಿಟಿಟಿಸಿಗೆ ಸಚಿವ ಶರಣಪ್ರಕಾಶ್ ಭೇಟಿ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅವರು ಮಂಗಳವಾರ ನಗರದ ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿದರು.







ತರಬೇತಿ ಕೇಂದ್ರದಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ವಿವಿಧ ಉಪಕರಣಗಳು ಮತ್ತು ತರಬೇತಿ ಯಂತ್ರಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ತರಬೇತಿಯ ಉಪಯುಕ್ತತೆಯ ಬಗ್ಗೆ ಮಾಹಿತಿ ಪಡೆದರು. ಜಿಟಿಟಿಸಿ ಡಿಪ್ಲೋಮಾ ಕೋರ್ಸ್‍ಗಳು ಶೇ. 100 ರಷ್ಟು ಉದ್ಯೋಗಾಧಾರಿತ ಕೋರ್ಸುಗಳಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ. ಜಿಟಿಟಿಸಿಯ ಅಭಿವೃದ್ಧಿ ಮತ್ತು ಕೇಂದ್ರವನ್ನು ಇನ್ನಷ್ಟು ಬಲಪಡಿಸಲು ಸರಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಅವರು ಹೇಳಿದರು.
ಜಿಟಿಟಿಸಿ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಸಿ.ಆರ್ ಅವರು ಸಚಿವರಿಗೆ ಜಿಟಿಟಿಸಿ ಕೇಂದ್ರದ ವಿವಿಧ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕರ್ನಾಟಕ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ.ಯು.ಟಿ. ಇಫ್ತಿಕಾರ್, ಜಿಟಿಟಿಸಿ ಘಟಕ ಮುಖ್ಯಸ್ಥ  ಕುಮಾರಸ್ವಾಮಿ, ಕೇಂದ್ರ ಕಚೇರಿ ತರಬೇತಿ ಉಪವ್ಯವಸ್ಥಾಪಕ ಲಕ್ಷ್ಮಣ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.






error: Content is protected !!
Scroll to Top