(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಕಿನ್ಯಾ ಇಲ್ಲಿಗೆ ಸಾಮಾನ್ಯ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎಸ್ಸಿ – ಬಿ.ಎಡ್ ಅಥವಾ ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.12,500 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 9886015827, 9449080150 ಅಥವಾ ಕಿನ್ಯಾ ಮೌಲಾನಾ ಆಜಾದ್ ಮಾದರಿ ಶಾಲೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ












