(ನ್ಯೂಸ್ ಕಡಬ) newskadaba.com ಜೂ. 16. ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ.
ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮತ್ತು ಸಿಎಂ ನಿವಾಸ ಮುತ್ತಿಗೆ ಕಾರ್ಯಕ್ರಮ ಹಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಚಲುವಾದಿ ನಾರಾಯಣಸ್ವಾಮಿ, ಶಾಸಕರು, ವಿಧಾನ ಪರಿಷತ್ ಸದಸ್ಯರು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.