ನಂದಿಹಿಲ್ಸ್: ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಜೂ. 16. ಜೂನ್ 19ರಂದು ನಂದಿಹಿಲ್ಸ್ ನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಲಾಗಿದೆ.

error: Content is protected !!
Scroll to Top