ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿಗೆ ಕೆಲಸ ಮಾಡುತ್ತಿರುವ ವೃತ್ತಿಪರ ಅಭ್ಯರ್ಥಿಗಳಿಗೆ (Working Professionals) ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.





ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿಗನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.






ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ವೇಳಾಪಟ್ಟಿ: ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಿಂದ ಅರ್ಜಿ ಡೌನ್‍ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25. ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ ಜೂನ್ 26. ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆ ಜೂನ್ 27. ಎಲ್ಲಾ ಹಂತಗಳ ಸೀಟು ಹಂಚಿಕೆ ಪ್ರಕ್ರಿಯೆ ಜೂನ್ 28 ರಿಂದ ಜೂನ್ 30ರ ವರೆಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‍ಸೈಟ್ https://dtek.karnataka.gov.in ಅಥವಾ dtetech.karnataka.gov.in/tartechnical ಅಥವಾ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಕಛೇರಿಯ ದೂರವಾಣಿ ಸಂಖ್ಯೆ: 0824-2211636/3516910/ 3542476 ಸಂಪರ್ಕಿಸಬಹುದು ಎಂದು ಕೆ.ಪಿ.ಟಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top