(ನ್ಯೂಸ್ ಕಡಬ) newsksdaba.com ಜೂ. 19. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರದಂದು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರು, “ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ಜೂನ್ 19, 1970 ರಂದು ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರ ಹಿರಿಯ ಮಗನಾಗಿ ಜನಿಸಿದರು.










