ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್



(ನ್ಯೂಸ್ ಕಡಬ) newsksdaba.com ಜೂ. 19.  ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ಕ್ರಿಕೆಟ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್​ವೆಲ್, ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ.





ಮ್ಯಾಕ್ಸ್​ವೆಲ್ ಕೇವಲ 48 ಎಸೆತಗಳಲ್ಲಿ ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 13. ಅಲ್ಲದೇ ಪ್ರಚಂಡ ಬ್ಯಾಟಿಂಗ್​ ನೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10500 ರನ್​ ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500+ ರನ್ ಕಲೆಹಾಕಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.






 

ಗ್ಲೆನ್ ಮ್ಯಾಕ್ಸ್​ವೆಲ್ ಟಿ20 ಕ್ರಿಕೆಟ್​ನಲ್ಲಿ 10500+ ರನ್​ಗಳೊಂದಿಗೆ 170 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 8 ಶತಕ ಬಾರಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ತಮ್ಮದಾಗಿಸಿಕೊಂಡಿದ್ದಾರೆ..

 

error: Content is protected !!
Scroll to Top