ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ 7 ವರ್ಷ ಜೈಲು ಶಿಕ್ಷೆ



(ನ್ಯೂಸ್ ಕಡಬ) newskadaba.com ಜೂ. 21. ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿರುವುದು ಸಾಬೀತಾದರೆ, ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.







 

ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಇದಕ್ಕೆ ಅವಶ್ಯಕವಾಗಿರುವ ಅಧಿಕಾರಿಗಳನ್ನು ಮಸೂದೆಯು ರಾಜ್ಯ ಸರ್ಕಾರಕ್ಕೆ ನೀಡಲಿದೆ ಎಂದು ಮೂಲಗಳು ಹೇಳುತ್ತವೆ.






 

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ಸ್ಥಾಪನೆಗೆ , ಕನ್ನಡ ಮತ್ತು ಸಂಸ್ಕೃತಿ ಸಚಿವರ ನೇತೃತ್ವದಲ್ಲಿ 6 ಸದಸ್ಯರ ಸಮಿತಿ ರಚಿಸಲು ಹಾಗೂ ಇದರ ವಿಚಾರಣೆಗೆ ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ ಮಸೂದೆ ಅವಕಾಶ ಮಾಡಿಕೊಡಲಿದೆ.

 

error: Content is protected !!
Scroll to Top